ಕುಂದಾಪುರದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ: ಯುವಕರಿಗೆ ಉದ್ಯೋಗಾವಕಾಶಗಳ ವೇದಿಕೆ

Homeಸ್ಥಳೀಯ ಸುದ್ದಿ

ಕುಂದಾಪುರದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ: ಯುವಕರಿಗೆ ಉದ್ಯೋಗಾವಕಾಶಗಳ ವೇದಿಕೆ

ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕುಂದಾಪುರ ಸಹಯೋಗದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏಪ್

ಮಾಬುಕಳದಲ್ಲಿ ಭೀಕರ ಅಪಘಾತ: ಟ್ರಕ್ ಡಿಕ್ಕಿಗೆ ಸ್ಕೂಟಿ ಸವಾರೆ ಮಹಿಳೆ ಸ್ಥಳದಲ್ಲೇ ಸಾವು
ಬೈಂದೂರಿನಲ್ಲಿ ರಸ್ತೆ ದುರಸ್ತಿ ಕಾರ್ಯ ಆರಂಭ
ಉಡುಪಿ–ದಕ್ಷಿಣ ಕನ್ನಡದಲ್ಲಿ ಮಳೆಯ ಮುನ್ಸೂಚನೆ

ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕುಂದಾಪುರ ಸಹಯೋಗದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏಪ್ರಿಲ್ 2, 2026 ರಂದು ಆಯೋಜಿಸಲಾಗಿದೆ.

ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ಆವರಣದಲ್ಲಿ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ವಿವಿಧ ಖಾಸಗಿ ಹಾಗೂ ಸಾರ್ವಜನಿಕ ವಲಯದ ಕಂಪನಿಗಳು ಭಾಗವಹಿಸಲಿವೆ. ಉದ್ಯೋಗಾವಕಾಶಗಳನ್ನು ಹುಡುಕುತ್ತಿರುವ ಯುವಕ-ಯುವತಿಯರಿಗೆ ಇದು ಉತ್ತಮ ಅವಕಾಶವಾಗಿದ್ದು, ಸ್ಥಳದಲ್ಲೇ ಸಂದರ್ಶನಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ.

 

 

10ನೇ ತರಗತಿ ಹಾಗೂ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮತ್ತು ಅಗತ್ಯ ದಾಖಲೆಗಳೊಂದಿಗೆ ಮೇಳದಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ.

ಇದಲ್ಲದೆ, ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ “ಉದ್ಯೋಗ ಮೇಳ-2026” ಲಿಂಕ್ ಮೂಲಕ ಮುಂಗಡ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುವಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ
ಅವಿನಾಶ್ ಜಿಲ್ಲಾ ವ್ಯವಸ್ಥಾಪಕರು
ಜಿಲ್ಲಾ ಪಂಚಾಯತ್ ಉಡುಪಿ – 9844234080
ಇವರನ್ನು ಸಂಪರ್ಕಿಸಬಹುದಾಗಿದೆ.

COMMENTS

WORDPRESS: 0
DISQUS: 0