ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಡಿಜಿಟಲ್ ಮಾದರಿಯಲ್ಲಿ ಜನಗಣತಿ ಪ್ರಕ್ರಿಯೆ ಆರಂಭಗೊಂಡಿದೆ. ಸುಮಾರು 15 ವರ್ಷಗಳ ಬಳಿಕ ನಡೆಯುತ್ತಿರುವ ಈ ಗಣತಿ, ಸಂಪೂರ್ಣವಾಗಿ ಆನ್‌ಲೈನ್ ಮೂಲಕ ನಡೆ
ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಡಿಜಿಟಲ್ ಮಾದರಿಯಲ್ಲಿ ಜನಗಣತಿ ಪ್ರಕ್ರಿಯೆ ಆರಂಭಗೊಂಡಿದೆ. ಸುಮಾರು 15 ವರ್ಷಗಳ ಬಳಿಕ ನಡೆಯುತ್ತಿರುವ ಈ ಗಣತಿ, ಸಂಪೂರ್ಣವಾಗಿ ಆನ್‌ಲೈನ್ ಮೂಲಕ ನಡೆಸಲಾಗುತ್ತಿರುವುದು ವಿಶೇಷವಾಗಿದೆ.
ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳಲ್ಲಿ ಏಪ್ರಿಲ್ 1ರಿಂದ ಈ ಡಿಜಿಟಲ್ ಜನಗಣತಿ ಚಾಲನೆ ನೀಡಲಾಗಿದೆ. ಈ ಬಾರಿ ಸಾರ್ವಜನಿಕರು ಸ್ವತಃ ತಮ್ಮ ಮಾಹಿತಿಯನ್ನು ವೆಬ್‌ಸೈಟ್ ಮೂಲಕ ಭರ್ತಿ ಮಾಡುವ ‘ಸ್ವಯಂ ಗಣತಿ’ (Self Enumeration) ವ್ಯವಸ್ಥೆಯನ್ನು ಪರಿಚಯಿಸಲಾಗಿದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ ಗಣತಿ ಪ್ರಕ್ರಿಯೆ ನಡೆಯಲಿದ್ದು, ಈ ಅವಧಿಯಲ್ಲಿ ನಾಗರಿಕರು ಆನ್‌ಲೈನ್ ಮೂಲಕ ತಮ್ಮ ವಿವರಗಳನ್ನು ಸಲ್ಲಿಸಬಹುದು. ನಂತರ ಏಪ್ರಿಲ್ 15ರಿಂದ ಮೇ 15ರವರೆಗೆ ಮನೆ ಪಟ್ಟಿ ಮತ್ತು ಮನೆ ಗಣತಿ ಕಾರ್ಯಗಳನ್ನು ಅಧಿಕಾರಿಗಳು ನಡೆಸಲಿದ್ದಾರೆ.
ಜನಗಣತಿಯಲ್ಲಿ ಭಾಗವಹಿಸಲು, se.census.gov.in ಅಧಿಕೃತ ಪೋರ್ಟಲ್‌ಗೆ ಭೇಟಿ ನೀಡಿ ಮೊಬೈಲ್ ಸಂಖ್ಯೆಯ ನೀಡಿ ನೋಂದಾಯಿಸಿಕೊಳ್ಳಿ. ನಂತರ ಕೇಳಲಾಗುವ ಮೂಲಭೂತ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಗಣತಿ ಪ್ರಕ್ರಿಯೆಯಲ್ಲಿ ಭಾಗಿಯಾಗಬಹುದು.
ಡಿಜಿಟಲ್ ಇಂಡಿಯಾ ಅಭಿಯಾನದ ಭಾಗವಾಗಿ ಆರಂಭಗೊಂಡಿರುವ ಈ ಹೊಸ ಕ್ರಮವು ದೇಶದ ಅಭಿವೃದ್ಧಿ ಯೋಜನೆಗಳಿಗೆ ಮಹತ್ವದ ಮಾಹಿತಿಯನ್ನು ಒದಗಿಸುವುದಾಗಿ ನಿರೀಕ್ಷಿಸಲಾಗಿದೆ. ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

COMMENTS