ಬೇಸಿಗೆ ತಾಪಮಾನ ಹೆಚ್ಚಳ: ಶಾಖದ ಹೊಡೆತದಿಂದ ರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ – ಜಿಲ್ಲಾಧಿಕಾರಿ

Homeಸ್ಥಳೀಯ ಸುದ್ದಿರಾಷ್ಟ್ರೀಯ ಸುದ್ದಿ

ಬೇಸಿಗೆ ತಾಪಮಾನ ಹೆಚ್ಚಳ: ಶಾಖದ ಹೊಡೆತದಿಂದ ರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ – ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ದಿನೇ ದಿನೇ ಏರುತ್ತಿರುವ ಬೇಸಿಗೆ ತಾಪಮಾನ ಹಿನ್ನೆಲೆ, ಶಾಖದ ಹೊಡೆತದಿಂದ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರ

ದೇಶದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ಆರಂಭ: ಸಾರ್ವಜನಿಕರಿಂದ ಸ್ವಯಂ ಮಾಹಿತಿ ದಾಖಲಿಸಲು ಅವಕಾಶ
ದೇಶದ ಆರ್ಥಿಕತೆ ಬೆಳವಣಿಗೆ ದಾರಿಯಲ್ಲಿ
ಕೇಂದ್ರ ಸರ್ಕಾರ ಹೊಸ ನೀತಿ ಪ್ರಕಟಣೆ

ಜಿಲ್ಲೆಯಲ್ಲಿ ದಿನೇ ದಿನೇ ಏರುತ್ತಿರುವ ಬೇಸಿಗೆ ತಾಪಮಾನ ಹಿನ್ನೆಲೆ, ಶಾಖದ ಹೊಡೆತದಿಂದ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಎಚ್ಚರಿಕೆ ನೀಡಿದ್ದಾರೆ.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮಾತನಾಡಿದ ಅವರು, ತೀವ್ರ ಬಿಸಿಲಿನ ಪರಿಣಾಮವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಹಾಗೂ ಶಾಖದ ಆಘಾತದಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.

ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಪೋಸ್ಟರ್, ಬ್ಯಾನರ್ ಗಳ ಮೂಲಕ ಶಾಖದಿಂದ ರಕ್ಷಿಸಿಕೊಳ್ಳುವ ಕ್ರಮಗಳ ಬಗ್ಗೆ ಮಾಹಿತಿ ಹಂಚುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕರು ಬಿಸಿಲಿನ ಸಮಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.

ಇದಲ್ಲದೆ, ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಓಆರ್‌ಎಸ್ ಸೇರಿದಂತೆ ಅಗತ್ಯ ಔಷಧಿಗಳ ಸಮರ್ಪಕ ದಾಸ್ತಾನು ಇರಿಸಿಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಮಾರುಕಟ್ಟೆ, ಬಸ್ ನಿಲ್ದಾಣ, ರೈಲು ನಿಲ್ದಾಣ ಮುಂತಾದ ಜನಸಂದಣಿ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು. ಬೋರ್‌ವೆಲ್‌ಗಳು ಹಾಗೂ ಟ್ಯಾಂಕರ್‌ಗಳ ಮೂಲಕ ನೀರಿನ ಸರಬರಾಜು ನಿರಂತರವಾಗಿರಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜೊತೆಗೆ, ಕುಡಿಯುವ ನೀರಿನ ಗುಣಮಟ್ಟವನ್ನು ನಿರಂತರವಾಗಿ ಪರೀಕ್ಷಿಸುವುದೂ ಕಡ್ಡಾಯವಾಗಿದೆ.

ಬೇಸಿಗೆ ಅವಧಿಯಲ್ಲಿ ಯಾವುದೇ ಪ್ರದೇಶದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಮುಂಚಿತವಾಗಿ ತಯಾರಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಇದೇ ವೇಳೆ, ಜಿಲ್ಲೆಯಲ್ಲಿನ ಜಾನುವಾರುಗಳಿಗೆ ಸಾಕಷ್ಟು ಮೇವು ಲಭ್ಯವಿದ್ದು, ಮುಂದಿನ ವಾರಗಳಿಗೂ ಕೊರತೆ ಉಂಟಾಗುವುದಿಲ್ಲ ಎಂದು ತಿಳಿಸಿದ್ದಾರೆ.

COMMENTS

WORDPRESS: 0
DISQUS: 0